ವಿಜಯಪುರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗ ಅಭ್ಯರ್ಥಿಗಳಿಗೆ ₹2 ಲಕ್ಷ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಯೋಜನೆಯಡಿ ಅರ್ಹ-ಅನರ್ಹ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
2013-14 ರಿಂದ 2017-18ನೇ ಸಾಲಿನವರೆಗೆ ಬಾಕಿ ಉಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಅರ್ಹ ವಿದ್ಯಾವಂತ ನಿರುದ್ಯೋಗಿಗಳಿಂದ ಸ್ವೀಕೃತವಾದ ಒಟ್ಟು ಅರ್ಜಿಗಳನ್ನು ಉಪವಿಭಾಗಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಅರ್ಹತಾ ಪಟ್ಟಿ ಆಯ್ಕೆ ಸಮಿತಿ ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಅರ್ಹ ಮತ್ತು ಅನರ್ಹ ಪಟ್ಟಿಯನ್ನು ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬ್ಲಾಕ್-01, ಪ್ರವಾಸಿ ಪ್ಲಾಜಾ, ಜಿಲ್ಲಾ ಕ್ರೀಡಾಂಗಣ ಎದುರುಗಡೆ, ಇಂಡಿ ರಸ್ತೆ, ವಿಜಯಪುರ ಕಚೇರಿಯಲ್ಲಿ ಜುಲೈ 6 ರಂದು ಪ್ರಕಟಿಸಲಾಗಿದೆ.
ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು 7 ದಿನಗಳವರೆಗೆ ಕಾಲಾವಕಾಶ ಒದಗಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.