
ವಿಜಯಪುರ: ‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ, ವೃಕ್ಷ ಅಭಿಯಾನ ಪ್ರತಿಷ್ಠಾನ ಸೇರಿದಂತೆ ಸಾರ್ವಜನಿಕರು ಸಂಘ-ಸಂಸ್ಥೆಗಳು, ಪಕ್ಷಾತೀತವಾಗಿ ಯುವಕರು ಕೈ ಜೋಡಿಸಿರುವುದರಿಂದ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿ, ಜಿಲ್ಲೆಯ ಅರಣ್ಯ ಪ್ರದೇಶ ವಿಸ್ತೀರ್ಣ ಶೇ 0.17 ರಿಂದ ಶೇ 2ಕ್ಕೆ ತಲುಪಲು ಸಾಧ್ಯವಾಗಿದೆ. ಮುಂದಿನ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ ಹೊಂದಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿಜಯಪುರ ವೃಕ್ಷ ಅಭಿಯಾನ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗಾಗಿ ಭಾನುವಾರ ಆಯೋಜಿಸಿದ್ದ ವೃಕ್ಷಥಾನ್ ಪಾರಂಪರಿಕ ಓಟ- 2025 ಸಂಭ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಗಿಡ-ಮರಗಳನ್ನು ಬೆಳೆಸಿ, ಸ್ವಚ್ಛ, ಸುಂದರ ಪರಿಸರ ನಿರ್ಮಾಣ ಮಾಡುವ ಪ್ರತಿಯೊಬ್ಬರು ಕೈ ಜೋಡಿಸಬೇಕು’ ಎಂದು ಹೇಳಿದರು.
ಸಾಧಕರಿಗೆ ಸನ್ಮಾನ: ಇಂಡಿ ತಾಲ್ಲೂಕಿನ ಹಳಗುಣಕಿ ಗ್ರಾಮದ ಪೊಲೀಸ್ ಇಲಾಖೆಯ ಭೀಮಾಶಂಕರ ಮಾಡಗ್ಯಾಳ, ನ್ಯೂ ಮುಂಬೈನ ಅಥ್ಲಿಟ್ ಶ್ರೇಯಸ್ ಯಶವಂತ ರಾವ್, ಕೆಂಗಲಗುತ್ತಿ ಶಾಲಾ ಮುಖ್ಯೋಪಾಧ್ಯಾಯ ಹಣಮಂತ ಕಾತರಕಿ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ನಿವೃತ್ತ ಸಿಬ್ಬಂದಿ ಮೌಲಾಸಾಬ ಮೈನುದ್ದೀನಸಾಬ ಅವರನ್ನು ಸನ್ಮಾನಿಸಲಾಯಿತು.
ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮೇಯರ್ ಎಂ.ಎಸ್. ಕರಡಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಆರ್. ಚವ್ಹಾಣ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿ.ಪಂ. ಸಿಇಒ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿಕೆಎಂ ಪ್ರಶಾಂತ, ವೃಕ್ಷ ಅಭಿಯಾನ ಪ್ರತಿಷ್ಠಾನದ ಸಂಘಟಕ ಮಹಾಂತೇಶ ಬಿರಾದಾರ, ಪಾಲಿಕೆ ಸದಸ್ಯ ದಿನೇಶ ಹಳ್ಳಿ ಇದ್ದರು.
ನಮ್ಮ ಮುಂದಿನ ಪೀಳಿಗೆಗೆ ಸ್ವಚ್ಛ ಸುಂದರ ಪರಿಸರ ಒದಗಿಸಿಕೊಡುವ ಹೊಣೆ ನಮ್ಮದು. ಈ ಮೂಲಕ ಪರಿಸರ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಜಾಗೃತಿ ಮೂಡಿಸುವುದು ಅತ್ಯವಶ್ಯಎಂ.ಬಿ.ಪಾಟೀಲ ಸಚಿವ
ಸಾಧಕರಿಗೆ ಸನ್ಮಾನ
ಇಂಡಿ ತಾಲ್ಲೂಕಿನ ಹಳಗುಣಕಿ ಗ್ರಾಮದ ಪೊಲೀಸ್ ಇಲಾಖೆಯ ಭೀಮಾಶಂಕರ ಮಾಡಗ್ಯಾಳ, ನ್ಯೂ ಮುಂಬೈನ ಅಥ್ಲಿಟ್ ಶ್ರೇಯಸ್ ಯಶವಂತ ರಾವ್, ಕೆಂಗಲಗುತ್ತಿ ಶಾಲಾ ಮುಖ್ಯೋಪಾಧ್ಯಾಯ ಹಣಮಂತ ಕಾತರಕಿ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ನಿವೃತ್ತ ಸಿಬ್ಬಂದಿ ಮೌಲಾಸಾಬ ಮೈನುದ್ದೀನಸಾಬ ಅವರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.