ADVERTISEMENT

ಟಿ.ಬಿ. ಡ್ಯಾಂ ಒಳಹರಿವು ಭಾರಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 12:49 IST
Last Updated 6 ಜುಲೈ 2022, 12:49 IST
ತುಂಗಭದ್ರಾ ಜಲಾಶಯ
ತುಂಗಭದ್ರಾ ಜಲಾಶಯ   

ಹೊಸಪೇಟೆ: ಇಲ್ಲಿಗೆ ಸಮೀಪದ ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಒಳಹರಿವು ಹೆಚ್ಚಾಗುತ್ತಲೇ ಇದೆ. ಬುಧವಾರ 34075 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಮಂಗಳವಾರ 22,536 ಕ್ಯುಸೆಕ್‌ ಒಳಹರಿವು ದಾಖಲಾದರೆ, ಸೋಮವಾರ 11,370 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 52.98 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ.

‘ಜಲಾನಯನ ಪ್ರದೇಶ ಹಾಗೂ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ: ಮೂರನೇ ದಿನವೂ ಜಿಲ್ಲೆಯಾದ್ಯಂತ ದಿನವಿಡೀ ಬಿಟ್ಟು ಬಿಟ್ಟು ಮಳೆ ಸುರಿಯಿತು. ಬೆಳಿಗ್ಗೆ ಕಾರ್ಮೋಡ ಆವರಿಸಿತ್ತು. ಹೊಸಪೇಟೆ, ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.