ADVERTISEMENT

ಟರ್ಬೋ ಏರ್‌ಲೈನ್ಸ್‌ ವಿಮಾನ ಹಾರಾಟ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 17:00 IST
Last Updated 17 ಜುಲೈ 2021, 17:00 IST
ಗೋವಿಂದ ಎಂ.ಕಾರಜೋಳ
ಗೋವಿಂದ ಎಂ.ಕಾರಜೋಳ   

ವಿಜಯಪುರ: ನಗರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು ಟರ್ಬೋ ಏರ್‌ಲೈನ್ಸ್‌ ಕಂಪನಿ ಮುಂದೆ ಬಂದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ವಿಜಯಪುರದಿಂದ ಬೆಂಗಳೂರಿಗೆಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ ಎಂದರು.

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್‌ಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಕಾಮಗಾರಿಯು ತ್ವರಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ADVERTISEMENT

ವಿಮಾನ ನಿಲ್ದಾಣದ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಗಳ ಜನತೆಗೆ ವಿಮಾನಯಾನ ಕೈಗೊಳ್ಳಲು ಅನುವಾಗಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.