ವಿಜಯಪುರ: ಇಂಡಿ ತಾಲ್ಲೂಕಿನ ಪ್ರಸಿದ್ಧ ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿಗೀಡಾದವರಲ್ಲಿ ಶೋಭು ಮಹಾದೇವ ಸಿಂಧೆ(52) ಎಂಬುವವ ಗುರುತು ಪತ್ತೆಯಾಗಿದೆ. ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ನರೇಂದ್ರ ಶಿವಾಜಿ ಕಟಕಧೋಂಡ ಎಂಬುವವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಸಂಜೆ ನಡೆದ ರಥೋತ್ಸವದ ವೇಳೆ ನೂಕುನಗ್ಗಲು ಉಂಟಾಗಿದ್ದು, ಈ ಸಂದರ್ಭದಲ್ಲಿ ಇಬ್ಬರು ರಥದ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.