ADVERTISEMENT

ವಿಜಯಪುರ | ಅನಧಿಕೃತ ಬಳಕೆ: 110 ಸಿಲಿಂಡರ್ ವಶ

​ಪ್ರಜಾವಾಣಿ ವಾರ್ತೆ
Published 13 ಮೇ 2025, 14:53 IST
Last Updated 13 ಮೇ 2025, 14:53 IST

ವಿಜಯಪುರ: ನಗರದಲ್ಲಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ 110 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡು, 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ತಿಳಿಸಿದ್ದಾರೆ. 

ಆಟೋ, ಹೋಟೆಲ್‍ಗಳು, ಬೀದಿ ಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಸೇರಿದಂತೆ ವಾಣಿಜ್ಯೋದ್ಯಮ ಸಿಲಿಂಡರ್‌ಗಳಿಗೆ ಗೃಹ ಬಳಕೆ ಗ್ಯಾಸ್ ಮರು ಭರ್ತಿ ಮಾಡಿ, ಮಾರಾಟ ಮಾಡುತ್ತಿರುವವರ ಮೇಲೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ. 

ಅನಧಿಕೃತವಾಗಿ ಎಲ್‍ಪಿಜಿ ಗ್ಯಾಸ್ ಬಳಕೆ ಮಾಡುವುದು ಹಾಗೂ ವಾಣಿಜ್ಯೋದ್ಯಮ ಸಿಲಿಂಡರ್‌ಗಳಿಗೆ ಮರು ಭರ್ತಿ ಮಾಡುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.