ADVERTISEMENT

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 8 ಮೇ 2021, 12:49 IST
Last Updated 8 ಮೇ 2021, 12:49 IST
ಪಿ.ಸುನೀಲ್‌ ಕುಮಾರ್
ಪಿ.ಸುನೀಲ್‌ ಕುಮಾರ್   

ವಿಜಯಪುರ: ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಾದ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ನಗರಾಭಿವೃದ್ಧಿ ಹಾಗೂಪೊಲೀಸ್‌(ಗೃಹ) ಇಲಾಖೆ ಸಿಬ್ಬಂದಿಮತ್ತು 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮಾತ್ರ ಕೋವಿಡ್‌-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಸದ್ಯಕ್ಕೆ ಜಿಲ್ಲೆಯಲ್ಲಿ 2 ನೇ ಡೋಸ್ ಲಸಿಕೆ ಮಾತ್ರ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊವಿಡ್-19 ರಲಸಿಕಾ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ 2,70,953 ಡೋಸ್ ಲಸಿಕೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಶಿಲ್ಡ್‌ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದ್ದು, ಕೊವಿಶಿಲ್ಡ್ ಲಸಿಕೆ ಪಡೆದವರು 2ನೇ ಡೋಸ್‌ ಅನ್ನು ಮೊದಲ ಡೋಸ್ ಪಡೆದ 42 ದಿನಗಳ ನಂತರದಲ್ಲಿ ಪಡೆಯುಬೇಕು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು 2ನೇ ಡೋಸ್‌ನ್ನು 28 ದಿನಗಳ ನಂತರ ಪಡೆಯಬೇಕು ಎಂದರು.

ADVERTISEMENT

ಸದ್ಯಕ್ಕೆ ಜಿಲ್ಲೆಯಲ್ಲಿ 2ನೇ ಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ. ಮೊದಲ ಡೋಸ್ ಲಸಿಕೆ ಪಡಯುವ ಅರ್ಹ ಫಲಾನುಭವಿಗಳಿಗೆ ನಂತರದ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ಮೊದಲನೇ ಡೋಸ್ ಲಸಿಕೆಯನ್ನು ನೀಡುವ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಸಾರ್ವಜನಿಕರು ಕೊರೊನಾ ನಿಯಂತ್ರಣನಿಯಮಗಳಾದ ಮಾಸ್ಕ್ ಬಳಕೆ,ಪರಸ್ಪರ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದುಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.