ವಿಜಯಪುರ: ಬೇಡ (ವಾಲ್ಮೀಕಿ) ಸಮಾಜಕ್ಕೆ ಅವಾಚ್ಯ ಪದಗಳಿಂದ ನಿಂದಿಸಿರುವ ಮಾಜಿ ಸಂಸದ ರಮೇಶ್ ಕತ್ತಿಯವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕೆಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ ರಮೇಶ್ ಕತ್ತಿ ಸಾರ್ವಜನಿಕವಾಗಿ ಬೇಡ ಸಮುದಾಯದವರನ್ನು ಅವಾಚ್ಯ ಪದಗಳಿಂದ ನಿಂದಿಸಿರುವುದು ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯುಂಟಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪ್ರಜ್ಞೆ ಇಲ್ಲದೆ ವರ್ತಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾಜಿ ಸಂಸದ ಕತ್ತಿಯವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು, ಇಲ್ಲವಾದಲ್ಲಿ ರಾಜ್ಯಾದ್ಯಂತ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.