ADVERTISEMENT

‘ವಿಕಲಚೇನತರಿಗೆ ಸೌಲಭ್ಯಗಳನ್ನು ಒದಗಿಸಿ’

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 20:16 IST
Last Updated 3 ಡಿಸೆಂಬರ್ 2019, 20:16 IST
ವಿಜಯಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸಲಾಯಿತು
ವಿಜಯಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸಲಾಯಿತು   

ವಿಜಯಪುರ: ‘ವಿಕಲಚೇತನರ ಕಷ್ಟಗಳನ್ನು ಅರಿತುಕೊಂಡು ಅವರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಮಾನವೀಯತೆಯ ನೆಲೆಯಲ್ಲಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇತರ ಇಲಾಖೆಗಳಲ್ಲಿ ಸರ್ಕಾರದಿಂದ ಶೇ 5ರಷ್ಟು ಅನುದಾನವನ್ನು ವಿಶೇಷವಾಗಿ ಕಾಯ್ದಿರಿಸಲಾಗಿದೆ. ಈ ಅನುದಾನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಅಧಿಕಾರಿಗಳು ಅವರ ಜವಾಬ್ದಾರಿಗಳನ್ನು ಅರಿತುಕೊಳ್ಳುವುದೇ ವಿಶ್ವ ವಿಕಲಚೇತನರ ದಿನಾಚರಣೆಯ ಮೂಲ ಉದ್ದೇಶವಾಗಿದೆ. ವಿಕಲಚೇತನರನ್ನು ಕಂಡು, ಅವರ ಕಷ್ಟ-ಸುಖಗಳನ್ನು ಅರಿತುಕೊಳ್ಳಬೇಕು. ಅವರ ಕಷ್ಟಗಳಿಗೆ ಸ್ಪಂದಿಸಬೇಕು. ಅರ್ಹ ವಿಕಲಚೇತನರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು’ ಎಂದರು.

ಝಳಕಿಯ ಗುರು ಚಂದ್ರಶೇಖರ ಕಿವುಡ, ಮೂಕ ಮಕ್ಕಳ ಶಾಲೆಯ ಮಕ್ಕಳು ಚೌಡಕಿ ಪದಗಳಿಗೆ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಸ್ವಪ್ನ ಕಿವುಡ, ಮೂಕ ಮಕ್ಕಳ ಶಾಲೆ ಹಾಗೂ ಬಿಎಲ್‌ಡಿಇ ಸಂಸ್ಥೆಯ ಶಾಲೆಯ ಮಕ್ಕಳು ದೇಶ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿದರು. ಶಿವಶರಣ ಹರಳಯ್ಯ ಅಂಧ ಶಾಲೆಯ ಮಕ್ಕಳು ಗಾಯನ, ೃತಿಕಾ ಜಂಗಿನಮಠ ಕೊಳಲು ವಾದನ ಪ್ರಸ್ತುತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ಬಿ.ಕುಂಬಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಿರ್ಮಲಾ ಸುರಪುರ, ಯುವಜನ ಸೇವಾ ಹಾಗೂ ಕ್ರೀಡಾ ಅಧಿಕಾರಿ ಎಸ್.ಜಿ.ಲೋಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.