ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದ ವೀರಭದ್ರೇಶ್ವರ ಜಾತ್ರೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ.29 ಹಾಗೂ 30ರಂದು ಆಯೋಜಿಸಲಾಗಿದೆ.
ಮೇ 29 ರಂದು ಬೆಳ್ಳಿಗೆ 5 ಗಂಟೆಗೆ ದೇವಸ್ಥಾನದಲ್ಲಿ ವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ಅಭಿಷೇಕ, ವಿಶೇಷ ಪೂಜೆ ನೆರವೇರಲಿದೆ. ಬಳಿಕ ಇದೇ ದಿನ ರಾತ್ರಿ 8 ಗಂಟೆಗೆ ದೇವಸ್ಥಾನದ ಎದುರು ಅಗ್ನಿ ಪ್ರಜ್ವಲನ ಕಾರ್ಯಕ್ರಮ ನಡೆಯಲಿದೆ. ನಂತರ ರಂಗು ರಂಗಿನ ಮದ್ದು ಸುಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೇ 30 ರಂದು ಬೆಳಗಿನ ಜಾವ 5 ಗಂಟೆಗೆವೀರಭದ್ರ ದೇವರ ಮೂರ್ತಿಗೆ ಭಕ್ತರಿಂದ ರುದ್ರಾಭಿಷೇಕ ನೆರವೇರಲಿದೆ. ಬಳಿಕ 8 ಗಂಟೆಗೆ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರ ದೇವರ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆಯು ಸಂಬಾಳ ವಾದ್ಯ ಮೇಳದೊಂದಿಗೆ ಜರುಗಲಿದೆ. ಬಳಿಕ ಈ ಮೆರವಣಿಗೆಯು ಊರ ಹೊರಗಿನ ಪಾದಗಟ್ಟಿ ತಲುಪಿದ ಬಳಿಕ ಪಾದಗಟ್ಟಿ ಪೂಜೆ, ಮಹಾ ಮಂಗಳಾರತಿಯೊಂದಿಗೆ ಮರಳಿ ಮೂಲ ದೇವಸ್ಥಾನ ತಲುಪಿದ ಕೂಡಲೇ ಅಗ್ನಿ ಪ್ರವೇಶ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ.
ಬಳಿಕ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.