ಸಿಂದಗಿ: ಪಟ್ಟಣದ ಸಾರಂಗಮಠ-ಗಚ್ಚಿನಮಠದ ಪೀಠಾಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಅವರನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಪಂಚಪೀಠಾಧೀಶ್ವರರ ಸಾನ್ನಿಧ್ಯದಲ್ಲಿ, ಸಮಸ್ತ ಶಿವಾಚಾರ್ಯರ ಸಮ್ಮುಖದಲ್ಲಿ ಮಂಗಳವಾರ ಘೋಷಣೆ ಮಾಡಲಾಗಿದೆ ಎಂದು ಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.