ADVERTISEMENT

ಸಿಂದಗಿ: ‘ವೀರಶೈವ ಧರ್ಮಕ್ಕೆ ತುಂಬಲಾರದ ನಷ್ಟ’

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 6:03 IST
Last Updated 16 ಡಿಸೆಂಬರ್ 2025, 6:03 IST
ಮೃತ  ಶಾಮನೂರು ಶಿವಶಂಕರಪ್ಪ ಅವರಿಗೆಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಮೃತ  ಶಾಮನೂರು ಶಿವಶಂಕರಪ್ಪ ಅವರಿಗೆಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಸಿಂದಗಿ: ಧರ್ಮಾಭಿಮಾನಿಗಳಾದ ಶಾಮನೂರು ಶಿವಶಂಕರಪ್ಪನವರ ನಿಧನ ವೀರಶೈವ ಧರ್ಮಕ್ಕೆ ತುಂಬಲಾರದ ನಷ್ಟ  ಎಂದು ಸಾರಂಗಮಠದ ಪೀಠಾಧ್ಯಕ್ಷ, ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸಾರಂಗಮಠದ ಆವರಣದಲ್ಲಿ ಸೋಮವಾರ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಶಾಖೆ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮಹಾಸಭಾ ತಾಲ್ಲೂಕು ಘಟಕದ ಶಾಖೆ ಅಧ್ಯಕ್ಷ ಅಶೋಕ ವಾರದ ಮಾತನಾಡಿದರು. ತಾಲ್ಲೂಕು ಜಂಗಮಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀಶೈಲ ನಂದಿಕೋಲ, ಕಾಂಗ್ರೆಸ್ ಧುರೀಣ ಶಿವನಗೌಡ ಬಿರಾದಾರ, ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಶಿವಜಾತ ಹಿರೇಮಠ, ಬಸವರಾಜ ವಸ್ತ್ರದ, ಜಂಗಿನಮಠ, ಎಸ್.ಎಸ್.ಮಲ್ಲೇದ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.