ವಿಜಯಪುರ: ನಾಗಠಾಣ ವಿಧಾನಸಭಾ ಮತಕ್ಷೇತ್ರದಲ್ಲಿ ನಾಗಠಾಣ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಮಾರ್ಚ್ 20 ರಂದು ಸಂಜೆ 4ಕ್ಕೆ ಬೃಹತ್ ರೋಡ್ ಶೋ ಆಯೋಜಿಸಲಾಗಿದೆ.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾರಿಗೆ ಸಚಿವ ಶ್ರೀರಾಮುಲು, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಉಮೇಶ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.