ವಿಜಯಪುರ: ‘ವೈದ್ಯಕೀಯ ಮಹಾವಿದ್ಯಾಲಯಗಳು ಇರುವ ಜಿಲ್ಲಾಸ್ಪತ್ರೆಗಳನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವಹಿಸಿ, ಅಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸದಾಗಿ ಜಿಲ್ಲಾಸ್ಪತ್ರೆಗಳನ್ನು ನಿರ್ಮಿಸುವ ಉದ್ದೇಶವಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 31ನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.
ವರ್ಗಾವಣೆಗೆ ಕ್ರಮ: ಸರ್ಕಾರಿ ವೈದ್ಯಾಧಿಕಾರಿಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ವೈದ್ಯಾಧಿಕಾರಿಗಳ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳ ಹಸ್ತಕ್ಷೇಪ ತಡೆಯಲು ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಲು ರಾಜ್ಯ ಸರ್ಕಾರ ವರ್ಗಾವಣೆ ಕೌನ್ಸಿಲ್ ಕಾಯ್ದೆ ಜಾರಿಗೆ ತಂದಿದೆ. ಆದರೆ, ಕೆಲವರು ಇದರ ವಿರುದ್ಧ ಕೋರ್ಟ್‌ಗೆ ಹೋಗಿದ್ದಾರೆ. ಕಾನೂನು ತೊಡಕು ನಿವಾರಣೆಯಾದ ಬಳಿಕ ಅರ್ಹತೆ, ಅನುಭವ, ಹಿರಿತನದ ಮೇರೆಗೆ ವರ್ಗಾವಣೆ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.