
ಪ್ರಜಾವಾಣಿ ವಾರ್ತೆ
ವಿಜಯಪುರ: ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜ.19 ರಿಂದ 24ರವರೆಗೆ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆನಂದ. ಕೆ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಮತ್ತು ಇತರರು ಮೊಬೈಲ್ ತರುವುದನ್ನು ಹಾಗೂ ಅದರ ಬಳಕೆ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.