ADVERTISEMENT

ವಿಜಯಪುರ: ಬೈಕ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ತಂದೆ, ಮಗ ಸಾವು

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 15:11 IST
Last Updated 14 ಜೂನ್ 2020, 15:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲ್ಹಾರ(ವಿಜಯಪುರ): ಪಟ್ಟಣದ ರಾಷ್ಟ್ರೀಯ ಹೆದ್ದಾರಿ 218ರ ಪೆಟ್ರೋಲ್ ಪಂಪ್ ಬಳಿ ಭಾನುವಾರ ಕ್ರೂಸರ್ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಂದೆ, ಮಗ ದಾರುಣವಾಗಿ ಮೃತಪಟ್ಟಿದ್ದಾರೆ.

ಯುಕೆಪಿ ವೃತ್ತದ ಮೂಲಕ ವಿಜಯಪುರದತ್ತ ವೇಗವಾಗಿ ಸಾಗುತ್ತಿದ್ದ ಕ್ರೂಸರ್ ಎದುರಿಗೆ ಬರುತ್ತಿದ್ದ ಬೈಕ್‌ಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಲಾಯಿಸುತ್ತಿದ್ದ ಮಗ ಈರಪ್ಪ ಹಂಗರಗಿ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತ್ತಿದ್ದ ತಂದೆ ಶಂಕ್ರಪ್ಪ ಹಂಗರಗಿ (65) ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಇಬ್ಬರು ತಾಲ್ಲೂಕಿನ ಮಸೂತಿ ಗ್ರಾಮದ ನಿವಾಸಿಗಳಾಗಿದ್ದು ಹಾಲಿ ಬಳೂತಿಯಲ್ಲಿ ವಾಸವಾಗಿದ್ದರು.

ಅಪಘಾತದ ನಂತರ ಕ್ರೂಸರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಕ್ರೂಸರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.