ADVERTISEMENT

ವಿಜಯಪುರ: ಬಸ್‌ ಸಂಚಾರ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 9 ಮೇ 2023, 13:41 IST
Last Updated 9 ಮೇ 2023, 13:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10 ರಂದು ನಡೆಯಲಿರುವ ಮತದಾನಕ್ಕೆ ಮತಗಟ್ಟೆ ಸಿಬ್ಬಂದಿಯನ್ನು ಕರೆದೊಯ್ಯಲು ಮತ್ತು ಕರೆದುಕೊಂಡು ಬರಲು ಒಟ್ಟು  280 ವಾಹನಗಳನ್ನು ಒಪ್ಪಂದದ ಮೇಲೆ ಒದಗಿಸಲಾಗಿದೆ.  ಇದರಿಂದಾಗಿ ವಿಭಾಗದ ಸ್ಥಳೀಯ ಬಸ್‌ ಕಾರ್ಯಾಚರಣೆಯಲ್ಲಿ ವ್ಯತ್ಯವಾಗಲಿದ್ದು,  ಪ್ರಯಾಣಿಕರು ಸಹಕರಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.