ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮಹಾವಿದ್ಯಾಲಯದ ವಿದ್ಯಾರ್ಥಿನಿ ಹರ್ಷಿತಾ ಚೌಕಿಮಠ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ವರ್ಷಕ್ಕೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ 3 ನೇ ರ‍್ಯಾಂಕ್ ಗಳಿಸಿದ್ದಾರೆ.
ಜುಲೈ 4ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25 ನೇ ಘಟಿಕೋತ್ಸವದಲ್ಲಿ ಹರ್ಷಿತಾ ಪಿ.ಚೌಕಿಮಠ ಅವರು ರ‍್ಯಾಂಕ್ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.