
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ವಿಜಯಪುರ: ಹತ್ತಿ ಖರೀದಿ ಕೇಂದ್ರದಲ್ಲಿ ಮೋಸ ಮಾಡಲಾಗುತ್ತಿದೆ, ರೈತರೊಂದಿಗೆ ಅಗೌರವವಾಗಿ ನಡೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಹತ್ತಿ ಸುರಿವಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ರೈತರೊಂದಿಗೆ ಹೋರಾಟ ನಡೆಸಿದರು.
ಯಾವುದೇ ರೈತರಿಗೆ ಅನ್ಯಾಯ ಮಾಡಬಾರದು ಹಾಗೂ ಮರ್ಯಾದೆ ಕೊಟ್ಟು ಮಾತನಾಡಬೇಕು, ರೈತರ ಜೀವನದ ಜೊತೆ ಚಲ್ಲಾಟ ಮಾಡಬಾರದು. ತೂಕದಲ್ಲಿ ಮೋಸ ಮಾಡದೇ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಬೇಕು ಎಂದು ರೈತ ಮುಖಂಡರು ಅಗ್ರಹಿಸಿದರು.
ರೈತರ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರು, ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.
ರೈತ ಮುಖಂಡರಾದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಹಲವಾರು ರೈತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.