ಪೊಲೀಸ್
(ಸಾಂದರ್ಭಿಕ ಚಿತ್ರ)
ವಿಜಯಪುರ: ತಾಳಿಕೋಟೆ ಪಟ್ಟಣದ ಲಾಡ್ಜ್ (ವಸತಿ ಗೃಹ)ವೊಂದರ ಮೇಲೆ ಬುಧವಾರ ರಾತ್ರಿ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಹಾಗೂ ವಸತಿ ಗೃಹದ ಮ್ಯಾನೇಜರ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ತಾಳಿಕೋಟೆ ಪಟ್ಟಣದ ಬಸವ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಲಾಡ್ಜ್ ವ್ಯವಸ್ಥಾಪಕ ಶರಣು ನಾಲತವಾಡ ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಹುಣಸಗಿ ತಾಲ್ಲೂಕಿನ ಅರಕೇರಿಯ ಶರಣಪ್ಪ ಬಳೂಲಗಿ(55) ಮತ್ತು ಮಸ್ಕಿಯ ಶಿವಯ್ಯ ಮದ್ದಾಲಿ(29) ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.