ADVERTISEMENT

ಚಡಚಣ: ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 15:42 IST
Last Updated 23 ಸೆಪ್ಟೆಂಬರ್ 2024, 15:42 IST
ಚಡಚಣದ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ನಿಗದಿಪಡಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಚಡಚಣದ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ನಿಗದಿಪಡಿಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಚಡಚಣ: ಪಟ್ಟಣವೂ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಗೆ ಈಚೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಚಡಚಣ ಪಟ್ಟಣದ ಹೊರವಲಯದಲ್ಲಿ ಕ್ರೀಡಾಂಗಣಕ್ಕೆಂದು ನಿಗದಿಪಡಿಸಿದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸ್ಥಳ ಪರಿಶೀಲನಾ ನಂತರ ಚಡಚಣ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ ಕಟ್ಟಡ ಕಾಮಗಾರಿ, ಗುಂಪು ಶೌಚಾಲಯ ಕಾಮಗಾರಿ, ಗ್ರಂಥಾಲಯ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಡಚಣದ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸಭೆ ನಡೆಸಿ, ದೀರ್ಘಕಾಲದ ಬಾಕಿ ಕಡತಗಳನ್ನು ಆದ್ಯತೆ ಮೇರೆಗೆ ವಿಲೇವಾರಿಗೊಳಿಸಲು ತಿಳಿಸಿದರು. ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ -ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.

ADVERTISEMENT

ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಚಡಚಣ ತಹಶೀಲ್ದಾರ್‌ ಎಸ್.ಬಿ.ಇಂಗಳೆ, ಎಡಿಎಲ್‌ಆ‌ರ್ ರಾಜಶೇಖರ ಕಾಂಬ್ಳೆ ಹಾಗೂ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.