ಸಾವು
(ಪ್ರಾತಿನಿಧಿಕ ಚಿತ್ರ)
ಇಂಡಿ: ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಶನಿವಾರ ಯುವಕನೊಬ್ಬನ್ನನ್ನು ನಾಲ್ಕು ಜನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸಂಕೇತ ದಾಮು ಜಾದವ (17) ಮೃತ ಯುವಕ ಎಂದು ಗುರುತಿಸಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಇಂಡಿ ಶಹರ ಸಿಪಿಐ ರತನಸಿಂಗ ಜೀರಗ್ಯಾಳ ಸೇರಿದಂತೆ ಪೊಲೀಸ್ ಇಲಾಖೆಯ ಹಲವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.