ADVERTISEMENT

26 ಜನರಲ್ಲಿ ಕಪ್ಪು ಶಿಲೀಂಧ್ರ ರೋಗ ಪತ್ತೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 12:13 IST
Last Updated 17 ಮೇ 2021, 12:13 IST

ವಿಜಯಪುರ: ಕೋವಿಡ್‌ ಎರಡನೇ ಅಲೆಯ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ 26 ಜನರಿಗೆ ಕಪ್ಪು ಶಿಲೀಂಧ್ರ ರೋಗ(ಬ್ಲ್ಯಾಕ್‌ ಫಂಗಸ್‌) ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಬಿಎಲ್‌ಡಿಇ ಆಸ್ಪತ್ರೆಯಲ್ಲಿ 15, ಆಯುಷ್‌ ಆಸ್ಪತ್ರೆಯಲ್ಲಿ 5, ಚೌಧರಿ ಆಸ್ಪತ್ರೆಯಲ್ಲಿ 2, ಯಶೋಧಾ ಆಸ್ಪತ್ರೆಯಲ್ಲಿ 2, ಅಲ್‌ ಅಮಿನ್‌ ವೈದ್ಯಕೀಯ ಆಸ್ಪತ್ರೆ ಮತ್ತು ಅಶ್ವಿನಿ ಆಸ್ಪತ್ರೆಯಲ್ಲಿ ತಲಾ ಒಬ್ಬ ರೋಗಿಗಳು ಇದ್ದಾರೆ ಎಂದು ಹೇಳಿದರು.

ಇಲ್ಲಿಯವರೆಗೆ ಈ ರೋಗದಿಂದ ಜಿಲ್ಲೆಯಲ್ಲಿ ಯಾರೂ ಸಾವಿಗೀಡಾಗಿಲ್ಲ ಎಂದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.