ADVERTISEMENT

ಶಶಿಕಲಾ ಜೊಲ್ಲೆಗೆ ಜಿಲ್ಲಾ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 15:30 IST
Last Updated 11 ಏಪ್ರಿಲ್ 2020, 15:30 IST
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ   

ವಿಜಯಪುರ: ಸಚಿವ ಸಿ.ಸಿ.ಪಾಟೀಲ ಅವರ ಬದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅವರ ಹೆಗಲಿಗೆ ವಿಜಯಪುರ ಜಿಲ್ಲಾ ಉಸ್ತುವಾರಿಯನ್ನು ವಹಿಸಲಾಗಿದೆ.

ನೆರೆಯ ಬೆಳಗಾವಿ ಜಿಲ್ಲೆಯವರಾದ ಜೊಲ್ಲೆ ಅವರು ಉಸ್ತುವಾರಿ ಸಚಿವರಾಗಿ ನೇಮಕವಾದ ಬಳಿಕ ಏ.13 ರಂದು ಬೆಳಿಗ್ಗೆ 9ಕ್ಕೆ ನಗರಕ್ಕೆ ಆಗಮಿಸಿ, ನಗರ ವ್ಯಾಪ್ತಿಯಲ್ಲಿ ನಾಲ್ಕು ಕೊರೊನಾ ನೈರ್ಮಲೀಕರಣ ಘಟಕಗಳನ್ನು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ನಿಯಂತ್ರಿಸುವ ಕ್ರಮಗಳ ಕುರಿತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.