
ಪ್ರಜಾವಾಣಿ ವಾರ್ತೆ
ಭೂಕಂಪ
ವಿಜಯಪುರ: ನಗರದಲ್ಲಿ ಬೆಳಿಗ್ಗೆ 7.49 ಕ್ಕೆ ಲಘು ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರ ಖಚಿತಪಡಿಸಿದೆ.
ನಗರದ ಹೊರವಲಯದ ಭೂತನಾಳ ತಾಂಡ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ಐದು ಕಿ.ಮೀ. ಆಳದಲ್ಲಿ ಸಂಭವಿಸಿದೆ. ಭೂಮಿ ತೀವ್ರವಾಗಿ ಕಂಪಿಸಿದ್ದು, ಜೊತೆಗೆ ಭಾರೀ ಶಬ್ದ ಹೊರಹೊಮ್ಮಿದೆ.
15 ದಿನಗಳ ಈಚೆಗೆ ಏಳೆಂಟು ಭಾರಿ ಸರಣಿ ಭೂಕಂಪನ ಸಂಭವಿಸುತ್ತಿರುವುದರಿಂದ ಜಿಲ್ಲೆಯ ಜನ ಭಯಭೀತರಾಗಿದ್ದಾರೆ.
ಲಘು ಭೂಕಂಪನದಿಂದ ಯಾವುದೇ ಹಾನಿ ಸಂಭವಿಸಿಲ್ಲ, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.