
ವಿಜಯಪುರ: ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ 47 ದಿನ ಪೂರೈಸಿತು.
ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಜೈ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ದಾಶ್ಯಾಳ, ‘ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುತ್ತದೆ. ಸರ್ಕಾರ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ’ ಎಂದರು.
‘ಒಂದು ವೇಳೆ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಬೆಳೆಸಬೇಕಾಗುತ್ತದೆ’ ಎಂದರು.
ಜೈ ಕರ್ನಾಟಕ ಸಂಘಟನೆಯ ಕಾಸಪ್ಪ ಈಳಗೇರ, ಲಕ್ಷ್ಮಿಕಾಂತ ಗೊಬ್ಬೂರ, ಗಿರೀಶ್ ಇಟ್ಟಂಗಿ, ವೆಂಕಟೇಶ ಕಂಬಾರ, ಸೋಮಲಿಂಗ ಕಂಬಾರ, ಶಂಕರ ಈಳಗೇರ, ಬಸವರಾಜ ದಾಶ್ಯಾಳ, ಅಶೋಕ ರಾಥೋಡ, ಅಮೀರ ಸೋಯಲ್ ಪಟೇಲ್, ರಾಜಶ್ರೀ ತೆಗ್ಗಿ ಹಾಗೂ ಹೋರಾಟ ಸಮಿತಿಯ ಎಲ್ಲಾ ಪದಾಧಿಕಾರಿಗಳು ಇದ್ದರು.
ವಿಜಯಪುರ ಅತಿ ಹಿಂದುಳಿದ ಜಿಲ್ಲೆಯಾಗಿದ್ದು ಸರ್ಕಾರಿ ವೈದ್ಯಕೀಯ ಕಾಲೇಜು ಅವಶ್ಯಕತೆ ಇದ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಜಿಲ್ಲಾ ಆಸ್ಪತ್ರೆಯನ್ನು ಬಿಟ್ಟುಕೊಡಬಾರದು.-ಕವಿತ ಹಿರೇಮಠ, ಜೈ ಕರ್ನಾಟಕ ಸಂಘದ ಮಹಿಳಾ ಮುಖಂಡರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.