ADVERTISEMENT

ವಿಜಯಪುರ: ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 4:19 IST
Last Updated 5 ಜನವರಿ 2026, 4:19 IST
   

ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಯೋಜನೆಯನ್ನು ವಿಸ್ತರಿಸಲು ಸದರಿ ಯೋಜನೆಯನ್ನು ಫ್ರಾಂಚೈಸಿಗಳ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ವಿಜಯಪುರ ತಾಲ್ಲೂಕಿನ ಕನ್ನೂರ, ಇಂಡಿ ತಾಲೂಕಿನ ಝಳಕಿ, ಸಿಂದಗಿ ತಾಲೂಕಿನ ರಾಂಪೂರ ಪಿ.ಎ  ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜ.15ರೊಳಗಾಗಿ ರಾತ್ರಿ 11:59ರವರೆಗೆ https://www.karnatakaone.gov.in/Public/FranchiseeTerms ಲಿಂಕ್ ಮೂಲಕ ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.