ADVERTISEMENT

ವಿಜಯಪುರ: ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 14:39 IST
Last Updated 18 ಜುಲೈ 2021, 14:39 IST
ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಹರಿಯುವ ಮಳೆ ನೀರಲ್ಲಿ ವಾಹನಗಳು ಸಾಗಿದವು–ಪ್ರಜಾವಾಣಿ ಚಿತ್ರ
ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಹರಿಯುವ ಮಳೆ ನೀರಲ್ಲಿ ವಾಹನಗಳು ಸಾಗಿದವು–ಪ್ರಜಾವಾಣಿ ಚಿತ್ರ   

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿ ಮತ್ತು ಭಾನುವಾರ ಸಂಜೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.

ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟಿಗೆ ಅಡಚಣೆಯಾಯಿತು.ಪ್ರಮುಖ ರಸ್ತೆಗಳ ಮೇಲೆ ನೀರು ಹರಿಯುವ ಜೊತೆಗೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಆವರಿಸಿತ್ತು. ಹೊಲ, ಜಮೀನುಗಳಲ್ಲಿ ನೀರು ನಿಂತಿದ್ದು, ಬೆಳೆಗಳಿಗೆ ಸಮಸ್ಯೆಯಾಗಿದೆ. ಹಳ್ಳಗಳು ತುಂಬಿ ಹರಿಯುತ್ತಿವೆ.

ಗಾಳಿ–ಮಳೆಯ ಪರಿಣಾಮ ನಗರದಲ್ಲಿ ಕೆಲ ಹೊತ್ತು ವಿದ್ಯುತ್‌ ಪೂರೈಕೆ ಸ್ಥಗಿತವಾಗಿತ್ತು. ವಾರಂತ್ಯದಲ್ಲಿ ಹೊರಗಡೆ ತೆರಳು ಆಗದೆ ಜನರು ಮನೆಯಲ್ಲೇ ಕಾಲ ಕಳೆಯುವಂತಾಯಿತು.

ADVERTISEMENT

ತಾಳಿಕೋಟೆ, ನಾಲತವಾಡ, ಬಸವನ ಬಾಗೇವಾಡಿ, ಕೊಲ್ಹಾರದಲ್ಲಿ ಬಿರುಸಿನ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.