ವಿಜಯಪುರ: ಬುಧವಾರ ಸುರಿದ ಬಿರುಸಿನ ಮಳೆಯಿಂದ ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ- ವಿಜಯಪುರ ರಸ್ತೆಯಲ್ಲಿರುವ ಸಂಗಮನಾಥ ದೇವಸ್ಥಾನ ಬಳಿ ಸೇತುವೆ ಮೇಲೆ ಹಳ್ಳ ಉಕ್ಕಿ ಹರಿದಿದೆ.
ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಲೆಕ್ಕಿಸದೇ ಬೈಕಿನಲ್ಲಿ ದಾಟಲು ಮುಂದಾದ ಕಳ್ಳಕವಟಗಿ ಗ್ರಾಮದ ಶ್ರೀಶೈಲ ಗಿಡ್ನವರ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಬೈಕ್ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.