
ಪ್ರಜಾವಾಣಿ ವಾರ್ತೆ
ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿ ಬಿಎಲ್‌ಇಡಿ ವಿಶ್ವ ವಿದ್ಯಾಲಯದ ಸಮೀಪದಲ್ಲಿರುವ ಕೃಷ್ಣ ಹೋಟೆಲ್‌ನಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಅಗ್ನಿ ಅವಘಡ ಆಗಿದೆ ಎಂದು ತಿಳಿದುಬಂದಿದೆ.
ಇಡೀ ಹೋಟೆಲ್‌ಗೆ ಬೆಂಕಿ ಹೊತ್ತಿ ಧಗಧಗಿಸಿ ಉರಿದು ಭಸ್ಮವಾಗಿದೆ.
ಹೋಟೆಲ್‌ನಲ್ಲಿರುವ ಪರಿಕರಗಳು ಕೆಲವೇ ನಿಮಿಷಗಳಲ್ಲಿ ಸುಟ್ಟು ಹೋಗಿದ್ದು, ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ.
ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಷ್ಟರಲ್ಲಿ ಇಡೀ ಕಟ್ಟಡ ನೆಲಸಮವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.