ADVERTISEMENT

ವಿಜಯಪುರದಲ್ಲಿ ಉದ್ಯೋಗ ಮೇಳ ಇಂದು

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 2:29 IST
Last Updated 2 ಫೆಬ್ರುವರಿ 2026, 2:29 IST
ವಿಜಯಪುರ ನಗರದ ದರ್ಬಾರ್ ಶಾಲಾ ಆವರಣದಲ್ಲಿ ಸೋಮವಾರ ನಡೆಯಲಿರುವ ಉದ್ಯೋಗ ಮೇಳದ ಪೂರ್ವ ಸಿದ್ಧತೆಯನ್ನು ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ ಪರಿಶೀಲಿಸಿದರು 
ವಿಜಯಪುರ ನಗರದ ದರ್ಬಾರ್ ಶಾಲಾ ಆವರಣದಲ್ಲಿ ಸೋಮವಾರ ನಡೆಯಲಿರುವ ಉದ್ಯೋಗ ಮೇಳದ ಪೂರ್ವ ಸಿದ್ಧತೆಯನ್ನು ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ ಪರಿಶೀಲಿಸಿದರು    

ವಿಜಯಪುರ: ನಗರದ ದರ್ಬಾರ್ ಶಾಲಾ ಆವರಣದಲ್ಲಿ ಫೆಬ್ರವರಿ 2ರಂದು ನಡೆಯಲಿರುವ ಉದ್ಯೋಗ ಮೇಳದ ಪೂರ್ವ ಸಿದ್ಧತೆಯನ್ನು ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ ಭಾನುವಾರ ಪರಿಶೀಲಿಸಿದರು.

ಉದ್ಯೋಗ ಮೇಳಕ್ಕೆ ನಿರ್ಮಾಣವಾಗಿರುವ ವೇದಿಕೆ, ಅಭ್ಯರ್ಥಿಗಳ ಸಂದರ್ಶನ ನಡೆಯುವ ಕೊಠಡಿಗಳ ವ್ಯವಸ್ಥೆ ಸೇರಿದಂತೆ ವ್ಯವಸ್ಥಿತ ಉದ್ಯೋಗ ಮೇಳಕ್ಕೆ ಕಲ್ಪಿಸಲಾಗಿರುವ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು. 

ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳಿಗೆ ಯಾವುದೇ ಗೊಂದಲವಾಗದಂತೆ, ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭ್ಯರ್ಥಿಗಳು ಸುಗಮವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ಸಂದರ್ಶನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಅತ್ಯಂತ ವ್ಯವಸ್ಥಿತ ಹಾಗೂ ಯಶಸ್ವಿ ಉದ್ಯೋಗ ಮೇಳ ಆಯೋಜನೆಗೆ ಸ್ಪಷ್ಟ ಮಾರ್ಗದರ್ಶನ ನೀಡಿದ ಅವರು,  ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಉದ್ಯೋಗ ಮೇಳದ ಯಶಸ್ಸಿಗಾಗಿ ಎಲ್ಲ ಇಲಾಖೆಗಳ ಸಹಕಾರದಿಂದ ಸಕಲ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸೂಚಿಸಲಾಯಿತು.

ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಿಲ್ ಆರ್., ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.