ADVERTISEMENT

ವಿಜಯಪುರದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 6:29 IST
Last Updated 28 ಸೆಪ್ಟೆಂಬರ್ 2020, 6:29 IST
ವಿಜಯಪುರದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ
ವಿಜಯಪುರದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ   
""

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ವಿಜಯಪುರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಸ್, ಆಟೊ ಸೇರಿದಂತೆ ಬಹುತೇಕ ವಾಹನ ಸಂಚಾರ ಇದೆ. ಆದರೆ, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ.
ನಗರದ ಬಹುತೇಕ ಕಡೆ ಅರ್ಧದಷ್ಟು ಅಂಗಡಿ, ಮುಂಗಟ್ಟುಗಳು ಬಾಗಿಲು ತೆರೆದಿವೆ. ಆದರೆ, ವ್ಯಾಪಾರ, ವಹಿವಾಟು ಕ್ಷೀಣವಾಗಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ರೈತ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಮಧ್ಯಾಹ್ನ 12ಕ್ಕೆ ನಗರದ ಸಿದ್ದೇಶ್ವರ ಗುಡಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸುವುದಾಗಿ ತಿಳಿಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.