
ವಿಜಯಪುರ: ಕೃಷಿ ವಿಶ್ವವಿದ್ಯಾಲಯ ಧಾರವಾಡ– ವಿಜಯಪುರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜ.4 ರಿಂದ 6ರವರೆಗೆ ವಿಜಯಪುರದ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.
ಜ.4ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ಸಚಿವ ಹಾಗೂ ಕೃಷಿ ವಿವಿಯ ಸಹ ಕುಲಾಧಿಪತಿ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಕೃಷಿ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಲಿದ್ದಾರೆ. ಕೃಷಿ ಪ್ರಕಟಣೆಗಳನ್ನು ಸಚಿವ ಶಿವಾನಂದ ಪಾಟೀಲ ಬಿಡುಗಡೆ ಮಾಡಲಿದ್ದು, ಶಾಸಕ ವಿಠ್ಠಲ ಕಟಕಧೋಂಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ಶಾಸಕರಾದ ಪ್ರಕಾಶ ಹುಕ್ಕೇರಿ, ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.