ವಿಜಯಪುರ: ಜಿಲ್ಲೆಯ ತಿಕೋಟಾ ಸಮೀಪದ ಘೋಣಸಗಿ ಗ್ರಾಮದಲ್ಲಿ ಭಾನುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಉಳಿದಂತೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಚದುರಿದಂತೆ ಅಲ್ಲಲ್ಲಿ ಗುಡುಗು, ಸಿಡಿಲು, ಗಾಳಿಯೊಂದಿಗೆ ತುಂತುರು ಮಳೆಯಾಗಿದೆ.
ಮೂರು ದಿನಗಳಿಂದ ಜಿಲ್ಲೆಯಾದ್ಯಂತ ದಟ್ಟ ಮೋಡ ಕವಿದ ವಾತಾವಣ ಇದ್ದು, ಅಲ್ಲಲ್ಲಿ ತುಂತುರು ಮಳೆಯಾಗಿದೆ. ಇದರಿಂದ ದ್ರಾಕ್ಷಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.