
ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಗೆ ಶುಕ್ರವಾರ 100 ನೇ ದಿನ ತುಂಬಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.
ನಗರದ ಗಾಂಧಿವೃತ್ತದಲ್ಲಿ 20 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಿಜಯಪುರದ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ಕಾರ್ಮಿಕರು, ರೈತರು, ಅಂಗವಿಕಲರು, ಮಕ್ಕಳು ಸಹಿ ಹಾಕಿದರು.
ಸರ್ಕಾರದ ಪಿಪಿಪಿ ನೀತಿಯನ್ನು ಖಂಡಿಸಿ, ಕಳೆದ ನೂರು ದಿನಗಳಿಂದ ಅನಿರ್ದಿಷ್ಟ ಧರಣಿ ಹಾಗೂ 8 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದು, ಸರ್ಕಾರ ಇನ್ನು ಜನಗಳ ಹೋರಾಟಕ್ಕೆ ಸ್ಪಂದಿಸದಿದ್ದಕ್ಕಾಗಿ ಜಿಲ್ಲೆಯ ಜನ ಜಾಗೃತಿ ಮೂಡಿಸುವ ಉದ್ದೇಶಕ್ಕಾಗಿ 100 ಮೀಟರ್ ಬ್ಯಾನರ್ ಮೇಲೆ ಸಾವಿರಾರು ಸಹಿಯನ್ನು ದಿನವಿಡಿ ಸಹಿ ಸಂಗ್ರಹ ಮಾಡಲಾಯಿತು.
100 ಮೀಟರ್ ಬ್ಯಾನರ್ ಅನ್ನು ಹಿಡಿದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿದರು.
ನೂರು ದಿನದ ಸಂಗ್ರಹಣ ಅಭಿಯಾನವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ಬಸವರಾಜ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲವನ್ನು ಖಾಸಗೀಕರಣ ಮಾಡಲು ಹೊರಟಿದೆ. ಜನ ಜಾಗೃತ ಆಗಬೇಕು. ಈ ಐತಿಹಾಸಿಕ ಹೋರಾಟ ಎಲ್ಲಾ ಜನರಿಗೆ ಮಾದರಿಯಾಗಲಿ ಎಂದು ಹೇಳಿದರು.
ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.