
ವಿಜಯಪುರದಲ್ಲಿ ಅಶ್ಲೀಲ ಸಾಹಿತ್ಯ, ಸಿನಿಮಾ ನಿಷೇಧಿಸಲು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ವಿಜಯಪುರ: ಉತ್ತರ ಕರ್ನಾಟಕದ ಜಾನಪದ ಸಾಹಿತ್ಯ, ಚಲನಚಿತ್ರಗಳಲ್ಲಿ ಹಿಂಸೆಯನ್ನು ಪ್ರಚೋದಿಸುವ ಬಂದೂಕು, ಮಚ್ಚು, ಲಾಂಗು, ರಾಬರಿ, ಐಟಂ ಸಾಂಗ್, ಮತ್ತು ಅತ್ಯಾಚಾರದಂತ ದೃಶ್ಯಗಳನ್ನು ಹೆಚ್ಚಾಗಿ ಬಳಸದಂತೆ ರಾಜ್ಯದಿಂದ ನಿಷೇಧಾಜ್ಞೆ ಹೇರಲು ಆಗ್ರಹಿಸಿ ಗುರುವಾರ ಕೆ.ಆರ್.ಎಸ್ ಪಕ್ಷದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕದಲ್ಲಿ ಅಶ್ಲೀಲ ಸಾಹಿತ್ಯ ಮತ್ತು ಸಂಗೀತದಿಂದಾಗಿ ಈ ಭಾಗದ ಮಕ್ಕಳ ಮನಸ್ಸಿನ ಮೇಲೆ ವ್ಯಾಪಕವಾದ ಪರಿಣಾಮಗಳು ಬೀರುತ್ತವೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಸಾಮಾಜದಲ್ಲಿ ಮೌಲ್ಯಗಳು ಕುಸಿತಗೊಂಡು ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ದುರ್ಗಪ್ಪ ಬೂದಿಹಾಳ, ವಿಕ್ರಮ ವಾಘಮೋರೆ, ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ಪ್ರವೀಣ ಕನಸೇ, ರಾಘವೇಂದ್ರ ಛಲವಾದಿ, ಮೈಬು ತಾಂಬೋಳಿ, ಸುರೇಂದ್ರ ಕುನಸಲೇ, ನಬಿರಸೂಲ ಹುಣಶ್ಯಾಳ, ಹಮಿದ ಇನಾಮದಾರ, ಅಣ್ಣಾ ಪೂಜಾರಿ, ಗಣಪತಿ ರಾಠೋಡ, ಮಲ್ಲಿಕಾರ್ಜುನ ಬಿರಾದಾರ ಉಪಸ್ಥಿತರಿದ್ದರು.