ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಬೆಳ್ಳಂಬೆಳಗ್ಗೆ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರವಾಗಿ ಮಳೆ ಸುರಿಯಿಲಾರಂಭಿಸಿದೆ.
ಬೆಳಿಗ್ಗೆ 4ರಿಂದ ಆರಂಭಗೊಂಡ ಮಳೆ ಬಿಟ್ಟು ಬಿಟ್ಟು ಸುರಿಯುತ್ತಲೇ ಇದೆ.
ದಿನಪತ್ರಿಕೆ, ಹಾಲು ವಿತರಣೆಗೂ ಮಳೆ ಅಡ್ಡಿಯಾಯಿತು.
ಬೇಸಿಗೆ ಬಿಸಿಲಿನಿಂದ ತತ್ತರಿಸಿದ್ದ ಜನ ಭಾನುವಾರದ ಮಳೆಯಿಂದ ನಿರಾಳರಾದರು. ಕಾವೇರಿದ ಇಳೆ ತಂಪಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.