ADVERTISEMENT

ವಿಜಯಪುರ | ಅಭಿವೃದ್ಧಿ ಕಾಮಗಾರಿಗಳಿಗೆ ₹2 ಕೋಟಿ ಮಂಜೂರು: ಶಾಸಕ ಬಸನಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2023, 14:16 IST
Last Updated 3 ಅಕ್ಟೋಬರ್ 2023, 14:16 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ₹2 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಸುಣಗಾರ ಗಲ್ಲಿಯ ಹುಲಿ ಬೆನ್ನವ್ವ ಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ₹5 ಲಕ್ಷ, ಸರ್ಕಾರಿ ಜಿಲ್ಲಾ ಆಸ್ಪತ್ರೆಯ ರೋಗಿಗಳ ನೋಂದಣಿ ಕೊಠಡಿ ನಿರ್ಮಾಣಕ್ಕೆ (ಹೆಚ್ಚುವರಿ) ₹20 ಲಕ್ಷ,  ವಾಲಿಕಾರ ವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ.52ರ ಕೊಠಡಿ ನಿರ್ಮಾಣಕ್ಕೆ ₹10 ಲಕ್ಷ,  ಕಮಾನಖಾನ್ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.18ರ ಕೊಠಡಿ ನಿರ್ಮಾಣಕ್ಕೆ ₹10 ಲಕ್ಷ ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ ಕಲ್ಪಿಸುವುಕ್ಕೆ ₹20 ಲಕ್ಷ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಸಮುದಾಯ ಭವನ ಮತ್ತು ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ಕಾಯ್ದಿರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT