ADVERTISEMENT

ವಿಜಯಪುರ | ಶೀತಗಾಳಿ, ಚಳಿ: ಶಾಲಾ ಸಮಯ ಬದಲು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 15:40 IST
Last Updated 21 ಡಿಸೆಂಬರ್ 2025, 15:40 IST
   

ವಿಜಯಪುರ: ಜಿಲ್ಲೆಯಲ್ಲಿ ಒಂದು ವಾರದಿಂದ ಶೀತತಾಳಿ ಬೀಸುತ್ತಿರುವುದರಿಂದ ಹಾಗೂ ತೀವ್ರ ಚಳಿಯ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲೆಗಳ ಸಮಯ ಬದಲಾವಣೆ ಮಾಡಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ.

ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಸೋಮವಾರದಿಂದ ಮುಂದಿನ 10 ದಿನಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ತರಗತಿಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣ ಹಾಗೂ ಹವಾಮಾನ ಇಲಾಖೆಯು ಮುಂದಿನ 10 ದಿನ ಜಿಲ್ಲೆಯಲ್ಲಿ ಶೀತಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಕ್ರಮಕೈಗೊಂಡಿದೆ.

ADVERTISEMENT

ಜಿಲ್ಲೆಯಲ್ಲಿ ಸದ್ಯ 7 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇನ್ನೂ ಕುಸಿಯುವ ಸಾಧ್ಯತೆ ಇದೆ. ತೀವ್ರ‌ ಚಳಿಯಿಂದ ಶಾಲಾ ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿರುವುದರಿಂದ ಶಾಲೆಗಳ ಸಮಯ ಬದಲಾವಣೆಗೆ ಸಾರ್ವಜನಿಕರು, ಶಿಕ್ಷಕರು, ಶಾಲಾ ಆಡಳಿತ ಮಂಡಳಿಗಳಿಂದ ಆಗ್ರಹ ಕೇಳಿ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.