ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆ ವತಿಯಿಂದ ಪಟ್ಟಣದ ಬಸವ ಮಂಟಪದಲ್ಲಿ ಜೂನ್ 29 ರಂದು ಬೆಳಿಗ್ಗೆ 10.30ಕ್ಕೆ ಸಾಹಿತಿ ಚನ್ನಪ್ಪ ಕಟ್ಟಿ ರಚಿತ ‘ಓಡುವ ಪಾದ ಕಾಡುವ ಸರಪಳಿ ಈ ತನಕದ ಕವಿತೆಗಳು’ ಗ್ರಂಥ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
ಸಾರಂಗಮಠದ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು, ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರು ಗ್ರಂಥ ಬಿಡುಗಡೆ ಮಾಡುವರು.
ಉಜಿರೆಯ ವಿಮರ್ಶಕ ರಾಜಶೇಖರ ಹಳೆಮನೆ ಗ್ರಂಥ ಅವಲೋಕನ ಮಾಡಲಿದ್ದಾರೆ. ಜಾನಪದ ವಿದ್ವಾಂಸ ಎಂ.ಎಂ.ಪಡಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.