ವಿಜಯಪುರ: ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ದ ಅಂಗವಾಗಿ ಶನಿವಾರ ನಡೆದ ‘ಅರಿವು ಮೂಡಿಸುವ ಕಾರ್ಯಕ್ರಮ’ಕ್ಕೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ.ಟಿ ಚಾಲನೆ ನೀಡಿದರು.
ವಿವಿಯ ಶಿಕ್ಷಣ ಅಧ್ಯಯನ ವಿಭಾಗ, ಎನ್‌ಎಸ್‌ಎಸ್ ಸ್ವಯಂ ಸೇವಕಿಯರು ಮಾನವ ಸರಪಳಿ ನಿರ್ಮಿಸುವ ಮೂಲಕ, ತಂಬಾಕಿನಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ಕರಪತ್ರಗಳನ್ನು ಹಂಚಿದರು.
ವಿಶ್ವವಿದ್ಯಾನಿಲಯದ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಂಬಾಕು ಮುಕ್ತ ದೇಶವಾಗಿಸಲು ಎಲ್ಲರೂ ಶ್ರಮ ಪಡಬೇಕು ಎಂದು ಪ್ರಚಾರ ನಡೆಸಿದರು.
ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಎನ್‌ಎಸ್‌ಎಸ್ ಸಂಯೋಜಕ ಪ್ರೊ.ಅಶೋಕ ಸುರಪುರ, ಶಿಕ್ಷಣ ಅಧ್ಯಯನ ವಿಭಾಗದ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ವಿಷ್ಣು ಶಿಂಧೆ, ಗುಲಾಬ ರಾಠೋಡ ಇಸದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.