ADVERTISEMENT

ವಿಜಯಪುರ: ಶಿಕ್ಷಕರ ನೇಮಕಾತಿ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:33 IST
Last Updated 21 ಮೇ 2022, 4:33 IST
   

ವಿಜಯಪುರ: ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ವಿಜಯಪುರ ನಗರದದ 16 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಆರಂಭವಾಗಿದೆ.

ಒಟ್ಟು 4330 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ, ಹೊರ ಜಿಲ್ಲೆಯ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಪರೀಕ್ಷೆ ಆರಂಭಕ್ಕೂ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿಗಳು ಹಾಜರಿದ್ದರು. ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು.

ADVERTISEMENT

ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾರ್ಥಿಗಳಿಗೆ ಮೊಬೈಲ್, ಕ್ಯಾಲ್ಯೂಕ್ಲೀಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್, ಬ್ಲೂ ಟೂತ್ ಹಾಗೂ ಇತರೆ ಎಲ್ಲಾ ಎಲೆಕ್ಟ್ರಾನಿಕ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ.

ಪರೀಕ್ಷಾರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತಿದೆ.

ಯಾವುದೇ ರೀತಿಯಾದ ಕೈ ಗಡಿಯಾರಗಳಿಗೆ ಅನುಮತಿ ನೀಡಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸಲಾಗಿದೆ.

ಜಾಮಿಟಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ, ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿ ನೀಡಲಾಗಿದೆ.

ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌, ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳ ಬಾಗಿಲು ಮುಚ್ಚಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಎದುರು ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.