ADVERTISEMENT

ವಿಜಯಪುರ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 15:18 IST
Last Updated 5 ಸೆಪ್ಟೆಂಬರ್ 2021, 15:18 IST
ವಿಜಯಪುರ ನಗರದಲ್ಲಿ ಭಾನುವಾರ ಧಾರಾಕಾರವಾಗಿ ಸುರಿದ ಮಳೆಯ ನಡುವೆ ವ್ಯಕ್ತಿಯೊಬ್ಬ ಬಣ್ಣದ ಛತ್ರಿ ಹಿಡಿದು ಸಾಗಿದರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ಭಾನುವಾರ ಧಾರಾಕಾರವಾಗಿ ಸುರಿದ ಮಳೆಯ ನಡುವೆ ವ್ಯಕ್ತಿಯೊಬ್ಬ ಬಣ್ಣದ ಛತ್ರಿ ಹಿಡಿದು ಸಾಗಿದರು –ಪ್ರಜಾವಾಣಿ ಚಿತ್ರ   

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆ ಸುರಿಯಿತು.

ವಿಜಯಪುರ ನಗರ, ಬಸವನ ಬಾಗೇವಾಡಿ, ಹೊರ್ತಿ, ಇಂಡಿ, ಕೊಲ್ಹಾರ, ದೇವರ ಹಿಪ್ಪರಗಿ ವ್ಯಾಪ್ತಿಯಲ್ಲಿ ಒಂದು ತಾಸು ಧಾರಾಕಾರ ಮಳೆ, ಬಳಿಕ ರಾತ್ರಿಯಿಡೀ ತುಂತುರು ಮಳೆ ಆಯಿತು. ಮಳೆ ನೀರು ರಸ್ತೆ ಮೇಲೆ ಹರಿಯಿತು. ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು. ತಗ್ಗು ಪ್ರದೇಶಗಳು, ಹೊಲಗಳಲ್ಲಿ ನೀರು ನಿಂತಿದ್ದ ದೃಶ್ಯ ಕಂಡುಬಂದಿತು.

ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಳೆಗಳಿಗೆ ಅನುಕೂಲವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.