
ಪ್ರಜಾವಾಣಿ ವಾರ್ತೆ
ಭೂಕಂಪ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 3.58ಕ್ಕೆ ಲಘು ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
‘ಭೂಕಂಪನದಿಂದ ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದೆವು. ಭೂಮಿ ಒಳಗಿನಿಂದ ಕಂಪನ ಮತ್ತು ತೀವ್ರವಾದ ಶಬ್ಧ ಹೊಮ್ಮಿತು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.