ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಾಲಿ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ ಅವರು ಶುಕ್ರವಾರ ನಿವೃತ್ತಿಯಾದರು.
ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ. ಶಾಂತಾದೇವಿ ಟಿ ಅವರನ್ನು ನೇಮಕ ಮಾಡಿ ವಿವಿಯ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ ಅವರು ಆದೇಶ ಹೊರಡಿಸಿದ್ದಾರೆ.
ಅಧಿಕಾರ ಹಸ್ತಾಂತರ:
ಪ್ರೊ.ಬಿ.ಕೆ.ತುಳಸಿಮಾಲ ಅವರು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ. ಅವರಿಗೆ ಶುಕ್ರವಾರ ಅಧಿಕಾರ ಹಸ್ತಾಂತರಿಸಿದರು.
ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಬಿ.ಕೆ.ತುಳಸಿಮಾಲ ಅವರನ್ನು ವಿಶ್ವವಿದ್ಯಾಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರ್, ವಿವಿಧ ವಿಭಾಗಗಳ ಮುಖ್ಯಸ್ಥರು,ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.