ಸಿಂದಗಿ (ವಿಜಯಪುರ): ಸಿಂದಗಿ ತಾಲ್ಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನದಿಂದ ದಿವಂಗತ ಖತಾಲಸಾಬ ಆಲಗೂರ ಸ್ಮರಣಾರ್ಥ ನೀಡುವ ‘ಅಪ್ಪ’ ರಾಜ್ಯಮಟ್ಟದ ಪ್ರಶಸ್ತಿಗೆ ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ ವಿನಯಕುಮಾರ ಮತ್ತು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹5 ಸಾವಿರ ನಗದು, ಫಲಕ ಒಳಗೊಂಡಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಆಗಸ್ಟ್ 30 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಟ ವಿಜಯರಾಘವೇಂದ್ರ ಪ್ರಶಸ್ತಿ ಪ್ರದಾನ ಮಾಡುವರು. ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.