ADVERTISEMENT

ಎಂ.ಟೆಕ್: ಪ್ರಶಾಂತ, ಚೈತ್ರಾ ರ‍್ಯಾಂಕ್ ಸಾಧನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 2:15 IST
Last Updated 3 ಫೆಬ್ರುವರಿ 2026, 2:15 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ವಿಜಯಪುರ: ನಗರದ ಸಿಕ್ಯಾಬ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025ನೇ ಸಾಲಿನ ಎಂ.ಟೆಕ್ (ಮಷಿನ್ ಡಿಸೈನ್) ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದಿದ್ದಾರೆ.

ADVERTISEMENT

ಪ್ರಶಾಂತ ಕೋಟೆಪ್ಪಗೊಳ ಮತ್ತು ಚೈತ್ರಾ ಮಡಿವಾಳಕರ್ ಅವರು ಚಿನ್ನದ ಪದಕದೊಂದಿಗೆ ರ‍್ಯಾಂಕ್ ಪಡೆದು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರ ಉಪಸ್ಥಿತಿಯಲ್ಲಿ ಇತ್ತೀಚೆಗೆ ನಡೆದ ವಿಟಿಯು ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.