ಡಿ.ಕೆ ಶಿವಕುಮಾರ್
–ಫೇಸ್‌ಬುಕ್
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ ಅಭ್ಯಂತರವಿಲ್ಲ ಎಂದರು.
ಸೋಮುವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಯವರು ಯುಕೆಪಿ ಸಂತ್ರಸ್ತರ ಮತ್ತು ಈ ಭಾಗದ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ, ತೀರ್ಮಾನಿಸುತ್ತೇವೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಅಂತಿಮ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸದ ಹೊರತು ಸದ್ಯ ನಾವೇನು ಮಾಡಲು ಸಾಧ್ಯವಿಲ್ಲ ಎಂದರು.
ಗೆಜೆಟ್ ನೋಟಿಫಿಕೇಶನ್ ಆಗುವ ಮುನ್ನ ಕಾಮಗಾರಿ ಮಾಡಬೇಕಾ, ಬೇಡವಾ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಅದರ ಮಧ್ಯೆಯೂ ನಾವು ಪರ್ಯಾಯ ಏನೇನು ಮಾಡಬೇಕು ಎಂಬ ಚರ್ಚೆ ಮಾಡುತ್ತೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.