ADVERTISEMENT

ಭಾರತ್‌ ಬಂದ್‌ಗೆ ವ್ಯಾಪಕ ಬೆಂಬಲ: ಭದ್ರತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 16:03 IST
Last Updated 7 ಡಿಸೆಂಬರ್ 2020, 16:03 IST

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.8ರಂದು ದೇಶವ್ಯಾಪ್ತಿ ಕರೆ ನೀಡಲಾಗಿರುವ ಭಾರತ್‌ ಬಂದ್‌ಗೆ ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌, ಬಿಎಸ್‌ಪಿ ಮತ್ತಿತರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ರೈತ ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳು ನಗರದಲ್ಲಿ ಬೃಹತ್‌ ಪ್ರತಿಭಟನೆ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ಮಾಡಿಕೊಂಡಿವೆ.

ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದಾಗಲಿ, ವಾಹನ ಸಂಚಾರಕ್ಕೆ ಅಡತಡೆ ಉಂಟು ಮಾಡುವುದಾಗಲಿ ಮಾಡಿದರೆ ಅಂತವರ ಮೇಲೆ ಕಾನೂನಿನ ಪ್ರಕಾರ ಕ್ರಮ ಕೈಕೊಳ್ಳಲಾಗುವುದು, ಯಾವುದೇ ಒತ್ತಾಯ ಪೂರ್ವಕ ಬಂದ್‍ಗೆ ಅವಕಾಶ ಇರುವದಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ.

ADVERTISEMENT

ಬಂದ್ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಮುಂಜಾಗ್ರತಾ ಕ್ರಮವಾಗಿ 156 ಪೊಲೀಸ್ ಅಧಿಕಾರಿಗಳು ಹಾಗೂ 689 ಪೊಲೀಸ್ ಸಿಬ್ಬಂದಿ ಜನರು ಮತ್ತು 3-ಐಆರ್‌ಬಿ ಹಾಗೂ 6 ಡಿಎಆರ್ ತುಕುಡಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.