ಸಾವು
(ಪ್ರಾತಿನಿಧಿಕ ಚಿತ್ರ)
ಕೊಲ್ಹಾರ: ಮಹಿಳೆಯೊಬ್ಬರು ಸೇತುವೆ ಮೇಲಿಂದ ಕೃಷ್ಣಾ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಕೊಲ್ಹಾರದ ನಿವಾಸಿ ಕೌಸರಬಾನು ಬಾಬುಸಾಬ ಮುಧೋಳ (46) ಮೃತಪಟ್ಟ ಮಹಿಳೆ.
ಕೊಲ್ಹಾರದ ಸಮೀಪದ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಮೆಲ್ಸೇತುವೆಯಿಂದ ನದಿಗೆ ಹಾರಿದ್ದಾರೆ. ನೆರೆದ ಜನರು ಸಹಾಯಕ್ಕೆ ಸೇತುವೆ ಮೇಲಿಂದ ಹಗ್ಗ ಬಿಟ್ಟು ಬದುಕಿಸಲು ಪ್ರಯತ್ನ ಪಟ್ಟರು ರಕ್ಷಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.